ಹೊಟ್ಟೆರಾಯನ ನಿತ್ಯದಟ್ಟಹಾಸವೊ ಬಾಳು |
ಧೃಷ್ಟ ಧಣಿಯೂಳಿಗಕೆ ಸೊಟ್ಟು ಮೈಬಾಗು ||
ಹಿಟ್ಟಿಗಗಲಿದ ಬಾಯಿ, ಬಟ್ಟೆಗೊಡ್ಡಿದ ಕೈಯಿ |
ಇಷ್ಟೆ ನಮ್ಮೆಲ್ಲ ಕಥೆ - ಮಂಕುತಿಮ್ಮ ||

ಆಟಕ್ಕೆ ಫಲವೇನು? ಕೌತುಕದ ರುಚಿಯೆ ಫಲ |
ಚೀಟಿ ತಾಂ ಬೀಳೆನೆನಲ್ ಆಟ ಸಾಗುವುದೆ? ||
ಏಟಾಯ್ತೆ ಗೆಲುವಾಯ್ತೆಯೆಂದು ಕೇಳುವುದೇನು? |
ಆಟದೋಟವೆ ಲಾಭ - ಮಂಕುತಿಮ್ಮ ||

ಎದ್ದೆದ್ದು ಬೀಳುತಿಹೆ, ಗುದ್ದಾಡಿ ಸೋಲುತಿಹೆ |
ಗದ್ದಲವ ತುಂಬಿ ಪ್ರಸಿದ್ಧನಾಗುತಿಹೆ ||
ಉದ್ಧರಿಸುವೆನು ಜಗವನೆನ್ನುತಿಹ ಸಖನೆ, ನಿ- |
ನ್ನುದ್ಧಾರವೆಷ್ಟಾಯ್ತೊ? - ಮಂಕುತಿಮ್ಮ ||

ತಳೆಯಲಾರನೆ ಬೊಮ್ಮ ಬೀಭತ್ಸರೂಪಗಳ? |
ನಲಿಯಲಾರನೆ ತಿಪ್ಪೆರೊಚ್ಚು ನಾತದಲಿ? ||
ಮಲವೇನೊ! ಹೊಲೆಯೇನೊ! ಜೀವಸಂಬಂಧವಲ |
ಮಲಿನದಲಿ ನೆನೆ ಶುಚಿಯ - ಮಂಕುತಿಮ್ಮ ||

ಭುಕ್ತಿ ನಿನಗೆಲ್ಲಿಯದು? ಭತ್ತ ತಾನೆಲ್ಲಿಯದೊ! |
ಎತ್ತಲಿನ ಗೊಬ್ಬರವೊ! ಎತ್ತಲಿನ ನೀರೋ! ||
ಭಾಕ್ತವಾರರ ದುಡಿತದಿನೊ ನಿನಗಾಗಿಹುದು! |
ಗುಪ್ತಗಾಮಿನಿಯೊ ಋಣ - ಮಂಕುತಿಮ್ಮ ||

ಅನ್ನದಾತುರಕಿಂತ ಚಿನ್ನದಾತುರ ತೀಕ್ಷ್ಣ |
ಚಿನ್ನದಾತುರಕುಂತ ಹೆಣ್ಣುಗಂಡೊಲವು ||
ಮನ್ನಣೆಯ ದಾಹವೀಯೆಲ್ಲಕಂ ತೀಕ್ಷ್ಣತಮ |
ತಿನ್ನುವುದದಾತ್ಮವನೆ - ಮಂಕುತಿಮ್ಮ ||

ಉದರದೈವಕೆ ಜಗದೊಳೆದುರು ದೈವವದೆಲ್ಲಿ? |
ಮೊದಲದರ ಪೂಜೆ; ಮಿಕ್ಕೆಲ್ಲವದರಿಂದ ||
ಮದಿಸುವುದದಾದರಿಸೆ, ಕುದಿವುದು ನಿರಾಕರಿಸೆ |
ಹದದೊಳಿರಿಸುವುದೆಂತೊ? - ಮಂಕುತಿಮ್ಮ ||

ಸತ್ತೆನೆಂದೆನಬೇಡ; ಸೋತೆನೆಂದೆನಬೇಡ |
ಬತ್ತಿತೆನ್ನೊಳು ಸತ್ತ್ವದೂಟೆಯೆನಬೇಡ ||
ಮೃತ್ಯುವೆನ್ನುವುದೊಂದು ತೆರೆಯಿಳಿತ; ತೆರೆಯೇರು |
ಮತ್ತೆ ತೋರ್ಪುದು ನಾಳೆ - ಮಂಕುತಿಮ್ಮ ||

ಧೃಷ್ಟ ಧಣಿಯೂಳಿಗಕೆ ಸೊಟ್ಟು ಮೈಬಾಗು ||
ಹಿಟ್ಟಿಗಗಲಿದ ಬಾಯಿ, ಬಟ್ಟೆಗೊಡ್ಡಿದ ಕೈಯಿ |
ಇಷ್ಟೆ ನಮ್ಮೆಲ್ಲ ಕಥೆ - ಮಂಕುತಿಮ್ಮ ||

ಆಟಕ್ಕೆ ಫಲವೇನು? ಕೌತುಕದ ರುಚಿಯೆ ಫಲ |
ಚೀಟಿ ತಾಂ ಬೀಳೆನೆನಲ್ ಆಟ ಸಾಗುವುದೆ? ||
ಏಟಾಯ್ತೆ ಗೆಲುವಾಯ್ತೆಯೆಂದು ಕೇಳುವುದೇನು? |
ಆಟದೋಟವೆ ಲಾಭ - ಮಂಕುತಿಮ್ಮ ||

ಎದ್ದೆದ್ದು ಬೀಳುತಿಹೆ, ಗುದ್ದಾಡಿ ಸೋಲುತಿಹೆ |
ಗದ್ದಲವ ತುಂಬಿ ಪ್ರಸಿದ್ಧನಾಗುತಿಹೆ ||
ಉದ್ಧರಿಸುವೆನು ಜಗವನೆನ್ನುತಿಹ ಸಖನೆ, ನಿ- |
ನ್ನುದ್ಧಾರವೆಷ್ಟಾಯ್ತೊ? - ಮಂಕುತಿಮ್ಮ ||

ತಳೆಯಲಾರನೆ ಬೊಮ್ಮ ಬೀಭತ್ಸರೂಪಗಳ? |
ನಲಿಯಲಾರನೆ ತಿಪ್ಪೆರೊಚ್ಚು ನಾತದಲಿ? ||
ಮಲವೇನೊ! ಹೊಲೆಯೇನೊ! ಜೀವಸಂಬಂಧವಲ |
ಮಲಿನದಲಿ ನೆನೆ ಶುಚಿಯ - ಮಂಕುತಿಮ್ಮ ||

ಭುಕ್ತಿ ನಿನಗೆಲ್ಲಿಯದು? ಭತ್ತ ತಾನೆಲ್ಲಿಯದೊ! |
ಎತ್ತಲಿನ ಗೊಬ್ಬರವೊ! ಎತ್ತಲಿನ ನೀರೋ! ||
ಭಾಕ್ತವಾರರ ದುಡಿತದಿನೊ ನಿನಗಾಗಿಹುದು! |
ಗುಪ್ತಗಾಮಿನಿಯೊ ಋಣ - ಮಂಕುತಿಮ್ಮ ||

ಅನ್ನದಾತುರಕಿಂತ ಚಿನ್ನದಾತುರ ತೀಕ್ಷ್ಣ |
ಚಿನ್ನದಾತುರಕುಂತ ಹೆಣ್ಣುಗಂಡೊಲವು ||
ಮನ್ನಣೆಯ ದಾಹವೀಯೆಲ್ಲಕಂ ತೀಕ್ಷ್ಣತಮ |
ತಿನ್ನುವುದದಾತ್ಮವನೆ - ಮಂಕುತಿಮ್ಮ ||

ಉದರದೈವಕೆ ಜಗದೊಳೆದುರು ದೈವವದೆಲ್ಲಿ? |
ಮೊದಲದರ ಪೂಜೆ; ಮಿಕ್ಕೆಲ್ಲವದರಿಂದ ||
ಮದಿಸುವುದದಾದರಿಸೆ, ಕುದಿವುದು ನಿರಾಕರಿಸೆ |
ಹದದೊಳಿರಿಸುವುದೆಂತೊ? - ಮಂಕುತಿಮ್ಮ ||

ಸತ್ತೆನೆಂದೆನಬೇಡ; ಸೋತೆನೆಂದೆನಬೇಡ |
ಬತ್ತಿತೆನ್ನೊಳು ಸತ್ತ್ವದೂಟೆಯೆನಬೇಡ ||
ಮೃತ್ಯುವೆನ್ನುವುದೊಂದು ತೆರೆಯಿಳಿತ; ತೆರೆಯೇರು |
ಮತ್ತೆ ತೋರ್ಪುದು ನಾಳೆ - ಮಂಕುತಿಮ್ಮ ||
-ಅ
24.12.2008
8.40PM
8 comments:
ಸುಂದರವಾದ ಚಿತ್ರಗಳಿಗೆ ಯೋಗ್ಯವಾದ ಕಗ್ಗಗಳನ್ನು quote ಮಾಡಿದ ನಿಮಗೆ
ಅಭಿನಂದನೆಗಳು.
excellent!
4 ನೇ ಫೋಟೋ ಅರ್ಥಾಗಿಲ್ಲ. ಏನ್ ನೆಡಿತಾ ಇದೆ ಅಲ್ಲಿ?
Arun sir,
ಫೋಟೊಗೆ ತಕ್ಕಂತ ಮಂಕುತಿಮ್ಮ ನ ಕಗ್ಗ !
spellbound at first one..
ವನ್ಯಮೃಗಗಳ ಮೂಲಕ ತತ್ವದರ್ಶನ...ಅದ್ಭುತ ಪ್ರಯತ್ನ.
ಅಶೋಕ ಉಚ್ಚಂಗಿ
http://mysoremallige01.blogspot.com/
[ಅಶೋಕ್] ಧನ್ಯವಾದಗಳು ಸರ್..
[ರಮೇಶ್] ಹುಷಾರು ಪಾ... ;-)
[ಶಿವು] ಕಗ್ಗಕ್ಕೆ ತಕ್ಕಂತ ಫೋಟೋ ಕೂಡ.. ಒಂಥರಾ commutative property ಇದ್ದ ಹಾಗೆ!! ಹೆ ಹ್ಹೆ ಹ್ಹೆ.. ಧನ್ಯವಾದಗಳು ಶಿವು ಅವರೇ..
[ವಿಕಾಸ್] ನಾಲ್ಕನೇ ಫೋಟೋದಲ್ಲಿ ಒಂದು ದೊಡ್ಡ ಹೆಬ್ಬಾವನ್ನು ಮೊಸಲೆಯೊಂದು ತಿಂದ ಕಾರಣ, ಹೆಬ್ಬಾವು ಸತ್ತು ಹೋಗಿದೆ. ಅದಲ್ಲದೆ, ಅಷ್ಟು ದೊಡ್ಡ ಗಾತ್ರದ ಹಾವನ್ನು ತಡೆಯಲಾಗದೆ ಮೊಸಲೆಯ ಹೊಟ್ಟೆ ಒಡೆದು ಹೋಗಿದೆ.
[ಶ್ರೀಕಾಂತ್] ಥ್ಯಾಂಕ್ಸ್...
[ಸುನಾಥ್] ಇದಕ್ಕೆ ಕಮೆಂಟಿಸಿದ್ದಕ್ಕೆ ನಿಮಗೂ ಅಭಿನಂದನೆಗಳು ಸರ್..
:-) nice ...!
Post a Comment